ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆಗಾಗಿ 2 ವಿಶೇಷ ತಂಡ ರಚನೆ ಮಾಡಲಾಗಿದೆ.ಉಡುಪಿ ಎಸ್ಪಿ ವಿಷ್ಣುವರ್ಧನ್ ಈ ತಂಡ ರಚನೆ ಮಾಡಿದ್ದಾರೆ.ಮಲ್ಪೆ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಬ್ರಹ್ಮಾವರ ಸರ್ಕಲ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಈ ತಂಡ ಕಾರ್ಯಾಚರಿಸಲಿದೆ.
ಉಳಿದಂತೆ ಉಡುಪಿ ಠಾಣೆ ನಿರೀಕ್ಷಕ ಪ್ರಮೋದ್ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ.ತಂಡವು ಬೆಳಗಾವಿಗೆ ತೆರಳಿ ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಲಿದೆ ಎಂದು ಉಡುಪಿಯಲ್ಲಿ ಎಸ್‌ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.
PublicNext
14/04/2022 09:24 pm