ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮನೆಯಲ್ಲಿ ಶವವಾಗಿ ಪತ್ತೆಯಾದ ಎಸ್‌ಪಿ ಶೋಭಾ ಕಟಾವ್ಕರ್

ಬೆಂಗಳೂರು: ಎಸ್.ಪಿ.ಶೋಭಾ ಕಟಾವ್ಕರ್ (53) ಪುಟ್ಟೇನಹಳ್ಳಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ.

ಈ ವೇಳೆ ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದು, ಮನೆಯಲ್ಲಿ ಶೋಭಾ ಕಟಾವ್ಕರ್ ಒಬ್ಬರೇ ಇದ್ದರು. ಇನ್ನು ಹಾಸನಕ್ಕೆ ತೆರಳಿದ ಮನೆಯವರು ರಾತ್ರಿ 8 ಗಂಟೆ ಸುಮಾರಿಗೆ ಶೋಭಾ ಅವರಿಗೆ ಕರೆ ಮಾಡಿದ್ದಾರೆ ಆದರೆ ಕರೆ ಸ್ವೀಕಾರವಾಗಿಲ್ಲ. ಹಾಗಾಗಿ ಸೆಕ್ಯುರಿಟಿಗೆ ಪರಿಶೀಲಿಸಲು ಸೂಚಿಸಿದ್ದಾರೆ. ಆಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ.

ಇತ್ತೀಚಿಗೆ ಎಸ್.ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ, ಹೃದಯಾಘಾತದಿಂದ ಸಾವನ್ನಪ್ಪಿರಬೋದು ಎಂದು ಶಂಕಿಸಲಾಗ್ತಿದ್ರೂ, ಪುಟ್ಟೇನಹಳ್ಳಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಅಂದ್ಹಾಗೆ, ಎಸ್.ಪಿ ಶೋಭಾ ಕಲಬುರಗಿಯ ಪಿಟಿಸಿ ಉಪ ಪ್ರಾಂಶುಪಾಲರಾಗಿ ನಿಯೋಜನೆಗೊಂಡಿದ್ದರು.

Edited By : Nagaraj Tulugeri
PublicNext

PublicNext

16/04/2022 07:20 am

Cinque Terre

41.11 K

Cinque Terre

3