ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇರಳದಲ್ಲಿ ಮತ್ತೋರ್ವ ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ

ತಿರುವನಂತಪುರಂ: ಕೇರಳದಲ್ಲಿ ಮತ್ತೋರ್ವ ಆರ್‌ಎಸ್ಎಸ್ ಕಾರ್ಯಕರ್ತನ ಹತ್ಯೆಯಾಗಿದ್ದು, ಪಾಲಕ್ಕಾಡ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಪಾಲಕ್ಕಾಡ್ ಪಟ್ಟಣದ ನಿವಾಸಿ, ಆರ್‌ಎಸ್‌ಎಸ್‌ ಕಾರ್ಯಕರ್ತ ಶ್ರೀನಿವಾಸನ್ (45) ಎಂಬುವವರನ್ನು ಗುಂಪೊಂದು ಶನಿವಾರ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಆರ್‌ಎಸ್ಎಸ್ ಕಾರ್ಯಕರ್ತ ಶ್ರೀನಿವಾಸನ್ ಹತ್ಯೆ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕೈವಾಡವಿದೆ ಎನ್ನುವ ಮಾತುಗಳು ಬಲವಾಗಿ ಕೇಳಿಬರುತ್ತಿದೆ.

ಪಿಎಫ್‌ಐ ನಾಯಕ ಸುಬೇರ್‌ (43) ಎಂಬುವವರ ಹತ್ಯೆ ನಡೆದ 24 ಗಂಟೆಗಳ ಒಳಗಾಗಿ ಈ ಘಟನೆ ನಡೆದಿದೆ. ಪಾಲಕ್ಕಾಡ್‌ ಜಿಲ್ಲೆಯ ಎಲಪ್ಪಳ್ಳಿ ಗ್ರಾಮದಲ್ಲಿ ಶುಕ್ರವಾರ ಸುಬೇರ್ ಅವರ ಹತ್ಯೆಯಾಗಿತ್ತು. ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಶ್ರೀನಿವಾಸನ್ ಹತ್ಯೆ ವಿಚಾರವಾಗಿ ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಆಕ್ರೋಶ ಹೊರಹಾಕಿದ್ದಾರೆ. "ಈ ಹತ್ಯೆಯನ್ನು ಪಾಪ್ಯುಲರ್ ಫ್ರಂಟ್ ಉಗ್ರರು ನಡೆಸಿದ್ದಾರೆ. ಆರ್‌ಎಸ್ಎಸ್ ಪ್ರಚಾರಕ್ ಶ್ರೀನಿವಾಸನ್ ಮೇಲೆ ಹಾಡಹಗಲೇ ದಾಳಿ ಮಾಡಿ ಹತ್ಯೆಗೈದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೇರಳದ ಪಿಣರಾಯಿ ವಿಜಯನ್ ಆಡಳಿತದಲ್ಲಿ 23 ಕಾರ್ಯಕರ್ತರನ್ನು ಕಳೆದುಕೊಂಡಿದೆ. ಕೇರಳದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಎಡಪಂಥಿಯ ಜಿಹಾದಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.

Edited By : Vijay Kumar
PublicNext

PublicNext

16/04/2022 07:25 pm

Cinque Terre

71.85 K

Cinque Terre

42