ನವದೆಹಲಿ: ದೆಹಲಿಯ ಜಹಾಂಗೀರ್ ಪುರಿ ಪ್ರದೇಶದಲ್ಲಿ ಇಂದು (ಶನಿವಾರ) ನಡೆದ ಹನುಮ ಜಯಂತಿ ಶೋಭಾಯಾತ್ರೆಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದೆ. ಈ ವೇಳೆ ಕಲ್ಲು ತೂರಾಟ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಗುಂಡು ತಗುಲಿದ್ದು, ಬಾಬೂ ಜಗಜೀವನ್ ರಾವ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಹೆಚ್ಚುವರಿ ಪೊಲೀಸರನ್ನು ಕಳುಹಿಸಲಾಗಿದೆ ಹಾಗೂ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ನಡೆಸಲಾಗಿದೆ.
ಹಿಂಸಾಚಾರ ಘಟನೆ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿದ ಕೇಜ್ರಿವಾಲ್ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.
PublicNext
16/04/2022 10:54 pm