ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಕಾಕಪೋರಾ ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯನಿರತ ಆರ್‌ಪಿಎಫ್ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ.
ಈ ದಾಳಿಯಲ್ಲಿ ಆರ್‌ಪಿಎಫ್ ಸಿಬ್ಬಂದಿ ಸುರೇಂದರ್ ಸಿಂಗ್ ಹಾಗೂ ಎಎಸ್‌ಐ ದೇವರಾಜ್ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸುರೇಂದರ್ ಸಿಂಗ್ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು, ಉಗ್ರರ ಶೋಧಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ನಾಲ್ವರು ಎಲ್ಇಟಿ ಭಯೋತ್ಪಾದಕರ ಹತ್ಯೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಈ ದುಷ್ಕೃತ್ಯ ನಡೆದಿದೆ.
PublicNext
18/04/2022 08:09 pm