ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಲಿತ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿ, ಕಾಲು ನೆಕ್ಕಿಸಿದ ಪುಂಡರು- 7 ಮಂದಿ ಅರೆಸ್ಟ್

ಲಕ್ನೋ: 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯನ್ನು ಥಳಿಸಿ ಕಾಲು ನೆಕ್ಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

ಈ ನಾಚಿಕೆಗೇಡಿನ ಪ್ರಕರಣವು ಯುಪಿಯ ರಾಯ್ ಬರೇಲಿಯಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರು ಜನ ದುಷ್ಕರ್ಮಿಗಳು 10ನೇ ತರಗತಿ ದಲಿತ ವಿದ್ಯಾರ್ಥಿಗೆ ಬೆಲ್ಟ್ ಮತ್ತು ವಿದ್ಯುತ್ ತಂತಿಯಿಂದ ಥಳಿಸಿದ್ದಾರೆ. ಅಲ್ಲದೇ ತಮ್ಮ ಪಾದಗಳನ್ನು ನೆಕ್ಕುವಂತೆ ಮಾಡಿದ್ದಾರೆ. ಈ ಘಟನೆಯನ್ನು ಏಪ್ರಿಲ್ 10 ನಡೆದಿದ್ದು ಎಂದು ಹೇಳಲಾಗುತ್ತಿದೆ. ರೌಡಿಗಳು ಬಾಲಕನಿಗೆ ಕಾಲು ನೆಕ್ಕುವಂತೆ ಮಾಡಿದ್ದಲ್ಲದೆ, ಜಾತಿ ನಿಂದಿಸುವ ಮಾತುಗಳನ್ನೂ ಆಡಿದ್ದಾರೆ.

ಹಲ್ಲೆಗೆ ಒಳಗಾದ ಬಾಲಕನ ತಾಯಿ ಈ ಪುಂಡರ ಹೊಲಗಳಲ್ಲಿ ದುಡಿಮೆ ಮಾಡುತ್ತಿದ್ದರು. ತಾಯಿ ಕೂಲಿಯ ಹಣಕ್ಕೆ ಕಿಶೋರ್ ಬೇಡಿಕೆ ಇಟ್ಟಿದ್ದಕ್ಕೆ ಪುಂಡರು ಥಳಿಸಿದ್ದಾರೆ ಎನ್ನಲಾಗಿದೆ. ವಿಡಿಯೋ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ರಾಯ್ ಬರೇಲಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದುಷ್ಕರ್ಮಿಗಳ ಪತ್ತೆ ಮತ್ತು ಕ್ರಮ ಜರುಗಿಸಲು ಐದು ತಂಡಗಳನ್ನು ರಚಿಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ಬಾಲಕನಾಗಿದ್ದು, ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಉಳಿದ 6 ಮಂದಿ ಆರೋಪಿಗಳನ್ನು ಅಭಿಷೇಕ್, ವಿಕಾಸ್ ಪಾಸಿ, ಮಹೇಂದ್ರ ಕುಮಾರ್, ಹೃತಿಕ್ ಸಿಂಗ್, ಅಮನ್ ಸಿಂಗ್ ಮತ್ತು ಯಶ್ ಪ್ರತಾಪ್ ಎಂದು ಗುರುತಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

19/04/2022 05:41 pm

Cinque Terre

94.33 K

Cinque Terre

45

ಸಂಬಂಧಿತ ಸುದ್ದಿ