ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಮಹಿಳೆಯೊಬ್ಬಳು ಮೂರ್ಛೆ ತಪ್ಪಿ ರೈಲಿನ ಕೆಳಗೆ ಬಿದ್ದರು ಪವಾಡ ರೀತಿ ಬದುಕುಳಿದ ಘಟನೆ ಅರ್ಜೆಂಟೀನಾದ ಬ್ಯೂನಸ್ ಐರಿಸ್‌ನಲ್ಲಿ ನಡೆದಿದೆ.
ಈ ಘಟನೆಯು ಮಾರ್ಚ್ 29ರಂದು ನಡೆದಿದ್ದು, ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯಾವಳಿಗಳು ಸೆರೆಯಾಗಿವೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.
ನ್ಯೂಯಾರ್ಕ್ ಪೋಸ್ಟ್‌ನ ವರದಿಯ ಪ್ರಕಾರ, ನಿಲ್ದಾಣದಲ್ಲಿ ನಿಂತಿದ್ದ ಇತರ ಪ್ರಯಾಣಿಕರು ಮಹಿಳೆಯನ್ನು ಸುರಕ್ಷಿತವಾಗಿ ಮೇಲೆಳೆದಿದ್ದಾರೆ. ನಂತರ ಆಕೆಯನ್ನು ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿಸಿದ್ದಾರೆ. ಬಳಿಕ ಅವಳನ್ನು ಗಾಲಿಕುರ್ಚಿಯಲ್ಲಿ ಕರೆದೊಯ್ದು ಆಸ್ಪತ್ರೆಗೆ ಕರೆದೊಯ್ಯಲು ಹೊರಗೆ ಕಾಯುತ್ತಿದ್ದ ಆಂಬ್ಯುಲೆನ್ಸ್‌ಗೆ ತಂದು ಮಲಗಿಸಿದ್ದಾರೆ. ಕೂಡಲೇ ಆಕೆಯನ್ನು ಬ್ಯೂನಸ್ ಐರಿಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಅಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
PublicNext
21/04/2022 03:00 pm