ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಸ್‌ಐ ಪರೀಕ್ಷಾ ಅಕ್ರಮ: ಬ್ಲೂಟೂತ್ ಬಳಸಿದ್ದ ಆರೋಪಿ ವಶಕ್ಕೆ

ಕಲಬುರಗಿ: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷಾ ಹಗರಣದಲ್ಲಿ ಬಗೆದಷ್ಟು ಅಕ್ರಮಗಳು ಹೊರಬರುತ್ತಲೇ ಇವೆ. ಶುಕ್ರವಾರ ಕಲಬುರಗಿಯಲ್ಲಿ ಮತ್ತೋರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು ಈತ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ್ದ ಎಂಬ ಆರೋಪ ಇದೆ.

ಕಲಬುರಗಿ ನಿವಾಸಿ ವಿಶಾಲ್ ಶಿರೂರ ಎಂಬ ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಮೂಲಕ ತನಿಖೆಯ ಹಾದಿ ಮತ್ತಷ್ಟು ಚುರುಕುಗೊಂಡಿದೆ.

ಪರೀಕ್ಷಾ ಕೇಂದ್ರದ ಒಳಗೆ ಎಲೆಕ್ಟ್ರಾನಿಕ್ ಉಪಕರಣ ಬಳಸಿದ್ದರ ಬಗ್ಗೆ ಮಾಹಿತಿ ಸಿಕ್ಕ ನಂತರ ಆ ಬಗ್ಗೆಯೂ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ‌. ಅಕ್ರಮದಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಶಾಸಕ ಎಂ.ವೈ ಪಾಟೀಲ್ ಅವರ ಗನ್‌ಮ್ಯಾನ್ ಹಯ್ಯಾಳಿ ದೇಸಾಯಿ ಹಾಗೂ ಈತನಿಗೆ ಸಹಾಯ ಮಾಡಿದ ಆರೋಪದ ಮೇಲೆ ಅಫಜಲಪುರದ ಶರಣಬಸಪ್ಪ ಎಂಬಾತನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ‌. ಈ ಮೂಲಕ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 12‌ಕ್ಕೆ ಏರಿಕೆಯಾಗಿದೆ.

Edited By : Nagaraj Tulugeri
PublicNext

PublicNext

22/04/2022 12:58 pm

Cinque Terre

58.34 K

Cinque Terre

1