ದಾವಣಗೆರೆ: ನಗರದಲ್ಲಿ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಿಸಾಳೆ ಕಾಂಪೌಂಡ್ ನಲ್ಲಿ ನಡೆದಿದೆ.
ಪಿಯುಸಿ ವಿದ್ಯಾರ್ಥಿ ಮಿಥುನ್ ಅನುಮಾನಾಸ್ಪದವಾಗಿ ಮೃತಪಟ್ಟಾತ.
ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದಾನೆ. ಇಂದು ಗಣಿತ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಶ್ವಾನದಳದೊಂದಿಗೆ ಪೊಲೀಸ್ ಭೇಟಿ ನೀಡಿದರು. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್, ಅಡಿಷನಲ್ ಎಸ್ಪಿ ಸೇರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
23/04/2022 04:21 pm