ಲಕ್ನೋ: ಪ್ರಾರ್ಥನೆ ಸಲ್ಲಿಸಲು ಬಂದ 11 ವರ್ಷದ ಬಾಲಕಿಯ ಮೇಲೆ ಚರ್ಚ್ ಪಾದ್ರಿಯೊಬ್ಬ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಚಾಂದಿನಗರ ಪ್ರದೇಶದಲ್ಲಿ ನಡೆದಿದ್ದು, ಆರೋಪಿ ಪಾದ್ರಿ ಆಲ್ಬರ್ಟ್ನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಾರ್ಥನೆ ಸಲ್ಲಿಸಲು ಚರ್ಚ್‌ಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪಾದ್ರಿಯು ಈ ಬಗ್ಗೆ ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿದ್ದಾನೆ. ಅಲ್ಲಿಂದ ಓಡಿ ಮನೆಗೆ ಬಂದ ಬಾಲಕಿ, ತನ್ನ ತಾಯಿಯ ಬಳಿ ಪಾಪಿಯ ಕೃತ್ಯವನ್ನು ಹೇಳಿಕೊಂಡಿದ್ದಾಳೆ. ತಾಯಿ ಈ ಬಗ್ಗೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪಾದ್ರಿ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
PublicNext
24/04/2022 10:43 pm