ಉತ್ತರ ಕನ್ನಡ: ನದಿಯಲ್ಲಿ ಕಪ್ಪೆಚಿಪ್ಪು ಆರಿಸಲು ಹೋಗಿದ್ದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಿಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಕಲ್ ಕಡಕಾರ್ ಬಳಿ ನಡೆದಿದೆ.
ಗಂಗಾವಳಿ ನದಿಯ ಹಿನ್ನೀರಿನಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು
ಕಡಕಾರ ನಿವಾಸಿ ಪೂಜಾ ಮಹೇಶ ನಾಯ್ಕ, ಕುಮಟಾ ಕೋನಳ್ಳಿ ನಿವಾಸಿ ದಿಲೀಪ ನಾಯ್ಕ, ಅಘನಾಶಿನಿ ನಿವಾಸಿ ನಾಗೇಂದ್ರ ನಾಯ್ಕ ಎಂದು ಗುರುತಿಸಲಾಗಿದೆ.
ಪೂಜಾ ಮಹೇಶ್ ಪಿ.ಯು.ಸಿ ವಿದ್ಯಾರ್ಥಿನಿಯಾಗಿದ್ದು ಹತ್ತಿರದ ಸಂಬಂಧಿಗಳಾದ ದಿಲೀಪ ಮತ್ತು ನಾಗೇಂದ್ರ ಕುಮಟಾದಿಂದ ಭಾನುವಾರ ಉಳಿಯಲು ಬಂದಿದ್ದರು. ಇದೇ ವೇಳೆ ಕಪ್ಪೆಚಿಪ್ಪು ಆರಿಸಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
PublicNext
24/04/2022 11:12 pm