ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ: ಮತ್ತಿಬ್ಬರ ಬಂಧನ

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್‌ನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಎಸ್‌.ಕೆ. ಶ್ರೀನಿವಾಸನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಒಟ್ಟು ಸಂಖ್ಯೆ 13ಕ್ಕೆ ಏರಿದೆ.

ಬಂಧಿತರು ಪಿಎಫ್‌ಐ ಮತ್ತು ಅದರ ರಾಜಕೀಯ ಪಕ್ಷವಾದ ಎಸ್‌ಡಿಪಿಐಗೆ ಸೇರಿದವರು ಎಂದು ಎಡಿಜಿಪಿ ವಿಜಯ್‌ ಸಾಖರೆ ತಿಳಿಸಿದ್ದಾರೆ.‌

ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಏ.16 ರಂದು ಆರ್‌ಎಸ್‌ಎಸ್‌ ಕಾರ್ಯಕರ್ತ ಎಸ್.ಕೆ.ಶ್ರೀನಿವಾಸನ್‌ (45) ಎಂಬಾತನ ಹತ್ಯೆಯಾಗಿತ್ತು. ಶ್ರೀನಿವಾಸನ್‌ ಹತ್ಯೆಗೆ ಎಸ್‌ಡಿಪಿಐ, ಪಿಎಫ್‌ಐನವರೇ ಕಾರಣ. ಈತನನ್ನು ಕೊಲ್ಲುವುದಾಗಿ ಹಿಂದೆ ಬೆದರಿಕೆ ಹಾಕಿದ್ದರು ಎಂದು ಶ್ರೀನಿವಾಸನ್‌ ಸ್ನೇಹಿತರು ಗಂಭೀರ ಆರೋಪ ಮಾಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಎಸ್‌ಡಿಪಿಐ ಹಾಗೂ ಪಿಎಫ್‌ಐನ 13 ಕಾರ್ಯಕರ್ತರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

Edited By : Vijay Kumar
PublicNext

PublicNext

26/04/2022 07:06 pm

Cinque Terre

30.58 K

Cinque Terre

0

ಸಂಬಂಧಿತ ಸುದ್ದಿ