ಜೈಪುರ: ಪತ್ನಿಯು ತವರು ಮನೆಯಿಂದ 1.5 ಲಕ್ಷ ರೂಪಾಯಿ ವರದಕ್ಷಿಣೆ ತರದ ಹಿನ್ನೆಲೆಯಲ್ಲಿ ಪತಿಯೇ ಆಕೆಯ ಮೇಲೆ ತನ್ನ ಸಂಬಂಧಿಕರಿಂದ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ. ಅಲ್ಲದೆ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ಚಿತ್ರೀಕರಿಸಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ಲೈಂಗಿಕ ದೌರ್ಜನ್ಯದ ವಿಡಿಯೋವನ್ನು ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡುವ ಮೂಲಕ ವರದಕ್ಷಿಣೆ ಹಣವನ್ನು ಪಡೆಯುವುದಾಗಿ ಪತಿ ತನ್ನ ಹೆಂಡತಿಗೆ ಹೇಳಿದ್ದಾನೆ. ಸಂತ್ರಸ್ತ ಮಹಿಳೆಯು ಪತಿ ಮತ್ತು ಆತನ ಸಂಬಂಧಿಕರಿಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಭರತ್‌ಪುರದ ಪೊಲೀಸ್ ಅಧಿಕಾರಿ, "ಮಹಿಳೆಯೊಬ್ಬಳು ತನ್ನ ಪತಿ ಮತ್ತು ಇಬ್ಬರು ಸಂಬಂಧಿಕರು ಭಾಗಿಯಾಗಿರುವ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದಾರೆ. ಯೂಟ್ಯೂಬ್‌ಗೆ ಅಶ್ಲೀಲ ವಿಡಿಯೋ ಅಪ್‌ಲೋಡ್ ಮಾಡಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಇದು ಇನ್ನೂ ದೃಢೀಕರಿಸಲ್ಪಟ್ಟಿಲ್ಲರೆ" ಎಂದು ಹೇಳಿದ್ದಾರೆ.
ಇನ್ನು ಸಂತ್ರಸ್ತೆ ನೀಡಿರುವ ದೂರಿನಲ್ಲಿ, 'ನನ್ನ ಅತ್ತೆಯಂದಿರು ವರದಕ್ಷಿಣೆಗಾಗಿ ನನಗೆ ಕಿರುಕುಳ ನೀಡುತ್ತಿದ್ದರು. ಅವರಿಗೆ ವರದಕ್ಷಿಣೆ ನೀಡದಿದ್ದಾಗ, ಅವರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದರು ಮತ್ತು ಆ ಘಟನೆಯನ್ನು ಚಿತ್ರೀಕರಿಸಿದರು. ಆ ವೀಡಿಯೊಗಳನ್ನು ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬನು ಐದು ದಿನಗಳ ಹಿಂದೆ ನನ್ನನ್ನು ಕಮಾನ್ ಗೆ ಕರೆತಂದಿದ್ದ, ಅಲ್ಲಿ ನನ್ನ ಮೇಲೆ ಅತ್ಯಾಚಾರವೆಸಗಿದರು' ಎಂದು ಅಳಲು ತೋಡಿಕೊಂಡಿದ್ದಾಳೆ.
PublicNext
30/04/2022 01:44 pm