ಶ್ರೀನಗರ: ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆ ಮುಗಿದ ಬಳಿಕ ಕೆಲ ಕಿಡಿಗೇಡಿಗಳು ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರ ಮೇಲೆ ಯುವಕರು ಕಲ್ಲು ತೂರಾಟ ನಡೆಸಿ ಘಟನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ನಡೆದಿದೆ.
ಅನಂತನಾಗ್ ಜಿಲ್ಲೆಯ ಜಂಗ್ಲಾತ್ ಮಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ. ಪ್ರಾರ್ಥನೆ ಮುಗಿಸಿ ಮರಳುತ್ತಿದ್ದ ವೇಳೆ ಯೋಧರು ಮತ್ತು ಪೊಲೀಸರ ವಾಹನಗಳನ್ನು ಗುರಿಯಾಗಿಸಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು. ಆಗ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸ್ಥಳದಲ್ಲಿ ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ವರದಿಯಾಗಿದೆ.
PublicNext
03/05/2022 03:37 pm