ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಯಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಆಕೆಯ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿದ ಮಗಳು!

ಅಮರಾವತಿ: ತಾಯಿಯ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಕೊನೆಗೆ ತನ್ನ ತಾಯಿಯ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಆಂಧ್ರಪ್ರದೇಶದ ಬಪಟ್ಲಾ ಜಿಲ್ಲೆಯಲ್ಲಿ ನಡೆದಿದೆ.

ಬಪಟ್ಲಾ ಜಿಲ್ಲೆಯ ತುಮ್ಮಲಪಾಲಂ ಮೂಲದ ರಾಮಚಂದ್ರ ರೆಡ್ಡಿ ಹಲ್ಲೆಗೆ ಒಳಗಾದ ವ್ಯಕ್ತಿ. ರಾಮಚಂದ್ರ ರೆಡ್ಡಿ ಎರಡು ವರ್ಷಗಳ ಹಿಂದೆ ಗುಂಟೂರು ಜಿಲ್ಲೆ ತೆನಾಲಿಯಲ್ಲಿ ನೆಲೆಸಿದ್ದರು. ಈ ವೇಳೆ ಐತಾನಗರದ ಮಹಿಳೆಯ ಜತೆಗಿನ ಪರಿಚಯ ವಿವಾಹೇತರ ಸಂಬಂಧಕ್ಕೆ ತಿರುಗಿತ್ತು. ರಾಮಚಂದರೆಡ್ಡಿ ಅವರು ರೈಲ್ವೆ ನಿಲ್ದಾಣದ ಬಳಿಯ ಲಾಡ್ಜ್‌ನಲ್ಲಿ ಉಳಿದುಕೊಂಡು ಕೂಲಿ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಇಬ್ಬರೂ ಒಟ್ಟಿಗೆ ಮದ್ಯ ಸೇವಿಸಿ ಸಂಬಂಧ ಮುಂದುವರಿಸಿದ್ದರು. ಆದರೆ, ಮಹಿಳೆಯ ಮಗಳಿಗೆ ಈ ಸಂಬಂಧ ಇಷ್ಟವಾಗಿರಲಿಲ್ಲ. ಈ ವಿಚಾರವಾಗಿ ತಾಯಿಯೊಂದಿಗೆ ಆಗಾಗ ಜಗಳ ನಡೆಯುತ್ತಿತ್ತು. ಮಗಳಿಗೆ ಕೇರ್ ಮಾಡದ ತಾಯಿ, ರಾಮಚಂದ್ರರೆಡ್ಡಿ ಜೊತೆ ಅಕ್ರಮ ಸಂಬಂಧ ಮುಂದುವರೆಸಿದ್ದಳು.

ಸೋಮವಾರ ರಾತ್ರಿ ಮಹಿಳೆ ಹಾಗೂ ಆಕೆಯ ಪ್ರಿಯಕರ ಮನೆಯಲ್ಲಿ ಒಟ್ಟಿಗೆ ಇರುವುದು ಮಹಿಳೆಯ ಮಗಳಿಗೆ ಗೊತ್ತಾಗಿತ್ತು. ತಕ್ಷಣವೇ ಮನೆಗೆ ಬಂದ ಮಗಳು ನಿದ್ದೆಗೆ ಜಾರಿದ್ದ ರಾಮಚಂದ್ರ ರೆಡ್ಡಿಯ ಮರ್ಮಾಂಗವನ್ನು ಬ್ಲೇಡ್‌ನಿಂದ ಕತ್ತರಿಸಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ತೆನಾಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗುಂಟೂರು ಜಿಜಿಎಚ್‌ಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

ಈ ಸಂಬಂಧ ಮಾಹಿತಿ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

Edited By : Vijay Kumar
PublicNext

PublicNext

03/05/2022 05:39 pm

Cinque Terre

41.56 K

Cinque Terre

4