ರಾಯ್‌ಪುರ: ವರ್ಕ್‌ಶಾಪ್‌ನಲ್ಲಿ ಜೆಸಿಬಿಗೆ ಗಾಳಿ ತುಂಬುತ್ತಿದ್ದಾಗ ಟೈರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ ಘಟನೆ ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನಡೆದಿದೆ.
ರಾಯ್‌ಪುರದ ಸಿಲ್ತಾರಾ ಕೈಗಾರಿಕಾ ಪ್ರದೇಶದಲ್ಲಿ ಮೇ 3ರಂದು ಸಂಭವಿಸಿದ ಈ ಘಟನೆಯ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೊಡ್ಡ ಟೈರ್ ಮಧ್ಯದಲ್ಲಿ ಕುಳಿತು ಓರ್ವ ಕೆಲಸಗಾರ ಗಾಳಿ ತುಂಬುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ನಂತರ ಇನ್ನೊಬ್ಬ ವ್ಯಕ್ತಿ ಬಂದು ಗಾಳಿಯ ಪ್ರಮಾಣವನ್ನು ಪರೀಕ್ಷಿಸಲು ಟೈರ್ ಅನ್ನು ಒಂದೆರಡು ಬಾರಿ ಒತ್ತಿದಾಗ ಅದು ಸ್ಫೋಟಗೊಂಡಿದೆ. ಪರಿಣಾಮ ಇಬ್ಬರೂ ಹಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಧ್ಯಪ್ರದೇಶದ ರೇವಾ ಜಿಲ್ಲೆಯ ಇಬ್ಬರು ಕಾರ್ಮಿಕರು ಟೈರ್ ಸ್ಫೋಟಗೊಂಡ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
05/05/2022 02:06 pm