ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮವನ್ನು ಛೋಟಾ ಪಾಕಿಸ್ತಾನ್ ಎಂದು ಕಿಡಿಗೇಡಿಗಳು ಘೋಷಣೆ ಕೂಗಿದ್ದಾರೆ. ಇದರ ವಿಡಿಯೋ ವೈರಲ್ ಆಗಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಘಟನೆ ಕುರಿತು ತನಿಖೆ ಕೈಗೊಳ್ಳುವಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕವಲಂದೆಯನ್ನು ಚೋಟಾ ಪಾಕಿಸ್ತಾನ ಎಂದು ಬಣ್ಣಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.
ಕಳೆದ ಮಂಗಳವಾರ ರಂಜಾನ್ ಹಬ್ಬದಂದು ಸಾಮೂಹಿಕ ಪ್ರಾರ್ಥನೆ ಮುಗಿಸಿ ಹೊರ ಬರುವ ವೇಳೆ ಕವಲಂದೆ ಬೋಲೇ ತೋ ಚೋಟಾ ಪಾಕಿಸ್ತಾನ್ ಠೀಕ್ ಹೈ ಎಂಬ ಆಡಿಯೋ ಹೊಂದಿರುವ ವಿಡಿಯೋ ಇದೀಗ ವೈರಲ್ ಆಗಿದೆ.
PublicNext
06/05/2022 07:56 am