ಬಳ್ಳಾರಿ: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಖೈದಿಯೊಬ್ಬ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಚಂದಪ್ಪ ಪರಾರಿಯಾದ ಖೈದಿ. ಕಳವು ಪ್ರಕರಣದಲ್ಲಿ ಪ್ರಕರಣದಲ್ಲಿ ಬಂಧಿತನಾಗಿದ್ದ ಚಂದಪ್ಪನನ್ನು ವಿಚಾರಣಾಧೀನ ಖೈದಿಯಾಗಿ ಕೊಪ್ಪಳದಿಂದ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿತ್ತು. ಇತನ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆ್ಯಂಬುಲೆನ್ಸ್ ಮೂಲಕ ಬಳ್ಳಾರಿ ಕೇಂದ್ರ ಕಾರಾಗೃಹ ಸಿಬ್ಬಂದಿ ವಿಮ್ಸ್ ಆಸ್ಪತ್ರೆ ಕರೆತಂದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಟಿ.ಬಿ.ಸ್ಯಾನಿಟೋರಿಯಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ರಾತ್ರಿಯಿಂದಲೇ ತುಂಬಾ ಸುಸ್ತಾದಂತೆ ನಟಿಸಿದ್ದ ಆರೋಪಿ ಚಂದಪ್ಪ ಬೆಳಗಿನ ಜಾವ ಬಹಿರ್ದೆಸೆಗೆ ಹೋಗುವ ನೆಪದಲ್ಲಿ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾನೆ. ಸುದ್ದಿ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಕೆಂದ್ರ ಕಾರಾಗೃಹದ ಹಿರಿಯ ಅಧಿಕಾರಿಗಳು ಖೈದಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿ ಕೂಡ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
06/05/2022 08:59 pm