ಮೈಸೂರು : ನನ್ನ ಸಾವಿಗೆ ಬಿಜೆಪಿ ಮುಖಂಡ ಅಪ್ಪಣ್ಣ ಎಂದು ಡೆತ್ ನೋಟ್ ಬರೆದಿಟ್ಟು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ಹೌದು ಅಪ್ಪಣ್ಣನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಡೆತ್ ನೋಟ್ ನಲ್ಲಿ ಅಪ್ಪಣ್ಣನ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಶರತ್ ಮೈಸೂರಿನ ಗಣೇಶ ನಗರದ ನಿವಾಸಿ.
ಘಟನೆಗೆ ಸಂಬಂಧಿಸಿದಂತೆ ಮೈಸೂರಿನ ಎನ್.ಆರ್ ಪೊಲೀಸ್ ಠಾಣೆಯಲ್ಲಿ ಅಪ್ಪಣ್ಣ ಹಾಗೂ ಪ್ರವೀಣ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ.
ಅಪ್ಪಣ್ಣನವರು ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ನ ಅಧ್ಯಕ್ಷರಾಗಿದ್ದು, ಎಚ್.ಡಿ ಕೋಟೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರು ಉದ್ಯಮಿ ಶರತ್ ಅವರಿಂದ 8 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಆದರೆ ಸಾಲ ವಾಪಸ್ ಕೊಟ್ಟಿರಲಿಲ್ಲ. ಪ್ರವೀಣ್ ಎಂಬಾತ ಕೂಡ ಇವರಿಗೆ ಪಾಲುದಾರಿಕೆಯಲ್ಲಿ ವಂಚನೆ ಮಾಡಿದ್ದ. ಒಂದೆಡೆ ಪಾಲುದಾರಿಕೆಯಲ್ಲಿ ವಂಚನೆ, ಮತ್ತೊಂದೆಡೆ ಸಾಲ ಪಡೆದ ಅಪ್ಪಣ್ಣನಿಂದಲೂ ವಂಚನೆ. ಇದರಿಂದ ಬೇಸತ್ತು ಶರತ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
PublicNext
09/05/2022 11:00 pm