ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಜಾಬ್ ಗುಪ್ತಚರ ಪ್ರಧಾನ ಕಚೇರಿ ಮೇಲೆ ಗ್ರೆನೇಡ್ ದಾಳಿ

ಚಂಡೀಗಡ: ಪಂಜಾಬ್ ಗುಪ್ತಚರ ದಳದ ಪ್ರಧಾನ ಕಚೇರಿ ಮೇಲೆ ಸೋಮವಾರ ರಾತ್ರಿ ಗ್ರೆನೇಡ್ ದಾಳಿ ನಡೆದಿದೆ. ಸ್ಫೋಟದಲ್ಲಿ ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಹಾಲಿಯ ಸೆಕ್ಟರ್ 77 ರಲ್ಲಿರುವ ಪಂಜಾಬ್ ಪೊಲೀಸ್ ಇಂಟೆಲಿಜೆನ್ಸ್ ಕಟ್ಟಡದಲ್ಲಿ ರಾತ್ರಿ 7:45ಕ್ಕೆ ಘಟನೆ ನಡೆದಿದೆ. ಮೊದಲಿಗೆ ಇದೊಂದು ಭಯೋತ್ಪಾದಕ ದಾಳಿ ಎಂದೇ ಹೇಳಲಾಗಿತ್ತು. ಆದರೆ ಮೊಹಾಲಿ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಭಯೋತ್ಪಾದಕರ ಕೃತ್ಯ ಅಲ್ಲ ಎಂದು ಸ್ಪಷ್ಟಪಡಿಸಿದರು. ಸ್ಫೋಟದ ನಂತರ ವಿಧಿ ವಿಜ್ಞಾನ ತಜ್ಞರ ತಂಡ ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿತು. ಕಟ್ಟಡದ ಸುತ್ತಮುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

Edited By : Vijay Kumar
PublicNext

PublicNext

10/05/2022 08:49 am

Cinque Terre

73.99 K

Cinque Terre

3

ಸಂಬಂಧಿತ ಸುದ್ದಿ