ವಿಜಯನಗರ: ಎರಡು ಪ್ರತ್ಯೇಕ ಘಟನೆಗಳಲ್ಲಿ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಇಬ್ಬರು ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಹಲಗಾಪುರ ಕೆರೆಯಲ್ಲಿ ಕೆಲಸ ಮಾಡುತ್ತಿದ್ದ ಓಬಳಾಪುರ ಗ್ರಾಮದ ದುರುಗಪ್ಪ (38) ಸುಸ್ತಾಗಿ, ಮರದ ನೆರಳಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.
ತಾಲ್ಲೂಕಿನ ಬಾಚಿಗೊಂಡನಹಳ್ಳಿ ಕೆರೆಯಲ್ಲಿ ಹೂಳೆತ್ತುವ ಕೆಲಸ ಮಾಡುವಾಗ ಚಿಲಗೋಡು ಗ್ರಾಮದ ತಳವಾರ ನಾಗಪ್ಪ (55) ತೀವ್ರ ಅಸ್ವಸ್ಥರಾಗಿ ಎದೆನೋವಿನಿಂದ ಮೃತರಾಗಿದ್ದಾರೆ ಎಂದು ನರೇಗಾ ಕಾರ್ಮಿಕ ರುದ್ರಪ್ಪ ತಿಳಿಸಿದ್ದಾರೆ. ಎರಡೂ ಗ್ರಾಮ ಪಂಚಾಯ್ತಿಗಳ ಪಿಡಿಒಗಳಿಂದ ಎಲ್ಲ ಮಾಹಿತಿ ಪಡೆದು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಮಹಾಲಿಂಗಪುರ ತಿಳಿಸಿದ್ದಾರೆ.
PublicNext
10/05/2022 09:22 am