ಬೆಂಗಳೂರು : ರಾಷ್ಟ್ರಕವಿ ಕುವೆಂಪು ರಚಿಸಿದ ನಾಡಗೀತೆಯನ್ನು ಅವಮಾನಿಸಿ ಅದನ್ನು ಅನುಸರಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಋಷಿಕುಮಾರ ಸ್ವಾಮೀಜಿ ಮೇಲೆ ಅಟ್ಯಾಕ್ ಮಾಡಲಾಗಿದೆ. ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮಿಯ ಮೇಲೆ ದಾಳಿ ನಡೆದಿದೆ. ಸ್ವಾಮಿಜಿಗೆ ಕಪ್ಪು ಮಸಿ ಬಳೆದು ಕರ್ನಾಟಕ ರಕ್ಷಣಾ ವೇದಿಕೆ ವಿಕೃತಿ ಮೆರೆದಿದ್ದಾರೆ. ದಾಳಿ ವೇಳೆ ಋಷಿ ಕುಮಾರ ಸ್ವಾಮಿಯ ಕಾಲಿಗೆ ಪೆಟ್ಟು ಬಿದ್ದಿದೆ.
ಸದ್ಯ ಕಾಳಿ ಸ್ವಾಮಿ ಖಾಸಗಿ ಆಸ್ಪತ್ರೆಗೆ ತೆರಳಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡಿದ್ದಾರೆ. ನಿಮಗೆ ಧಮ್ ಇದ್ರೆ ನಾನು ಕುವೆಂಪು ಅವರನ್ನು ಕನ್ನಡಪಡೆಗಳನ್ನು ನಿಂದಿಸಿದನ್ನು ಕೋರ್ಟ್ ನಲ್ಲಿ ಸಾಬೀತು ಮಾಡಿ ಎಂದಿದ್ದಾರೆ. ನಾನು ಇದಕ್ಕೆಲ್ಲ ಹೆದರಲ್ಲವೆಂದು ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆಗೆ ಕಾಳಿ ಸ್ವಾಮಿ ಓಪನ್ ಚ್ಯಾಲೆಂಜ್ ಕೊಟ್ಟಿದ್ದಾರೆ.
PublicNext
13/05/2022 10:11 am