ಬೆಂಗಳೂರು : ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ಕಾಲಿಗೆ ಪೊಲೀಸರು ಗುಂಡು ಹೊಡೆದ ಘಟನೆ ಕೆಂಗೇರಿಯ ಮೇಲ್ಸೆತುವೆ ಬಳಿ ನಡೆದಿದೆ. ಮೂತ್ರ ವಿಸರ್ಜನೆಗೆ ನಿಲ್ಲಿಸಿ ಎಂದು ನೈಸ್ ರೋಡಲ್ಲಿ ಕೇಳಿಕೊಂಡಿದ್ದ ಆರೋಪಿ ನಾಗೇಶನ ಬೇಡಿಕೆಗೆ ಅವಕಾಶ ಕೊಟ್ಟ ಪೊಲೀಸರು ಬೆಂಗಳೂರು ಸಿಟಿಯ ಕೆಂಗೇರಿ ಮೇಲ್ಸೇತುವೆ ಬಳಿ ಗಾಡಿ ನಿಲ್ಲಿಸಿದ್ದಾರೆ.
ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ನಾಗೇಶ್ ನನ್ನು ಹಿಡಿಯಲು ಹೋದ ಕಾನ್ಸೇಟಬಲ್ ಮಹಾದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ವೇಳೆ ಆರೋಪಿಯನ್ನ ಹಿಡಿಯಲು ಇನ್ಸ್ಪೆಕ್ಟರ್ ಪ್ರಶಾಂತ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರು.
ಇನ್ಸ್ಪೆಕ್ಟರ್ ಎಚ್ಚರಿಕೆಗೆ ಬಗ್ಗದೆ ಇನ್ಸ್ಪೆಕ್ಡರ್ ಮೇಲೆ ಕಲ್ಲು ತೂರಿ ತಪ್ಪಿಸಿಕೊಳ್ಳಲು ಮುಂದಾದ ಆರೋಪಿ ನಾಗೇಶ್ ಬಲಗಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ.
ಇನ್ನು ಗಂಡೇಟು ತಿಂದ ಆರೋಪಿಗೆ ಪ್ರಾಥಮಿಕ ಚಿಕಿತ್ಸೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಬಿಜಿಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುವುದು.
PublicNext
14/05/2022 07:13 am