ಬಾಗಲಕೋಟೆ : ಇತ್ತೀಚೆಗಷ್ಟೆ ಬಾಗಲಕೋಟೆಯಲ್ಲಿ ವಕೀಲೆಯೋರ್ವಳ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿದ ವಿಡಿಯೋ ಭಾರೀ ವೈರಲ್ ಆಗಿತ್ತು. ಇನ್ನು ವಕೀಲೆ ಮೇಲಿನ ಹಲ್ಲೆ ಖಂಡಿಸಿ ವಕೀಲರ ಸಂಘದಿಂದ ಪ್ರತಿಭಟನೆ ಕೂಡಾ ನಡೆದಿತ್ತು. ಸದ್ಯ ವಕೀಲೆ ಮೇಲಿನ ಹಲ್ಲೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ.
ಹೌದು ವಕೀಲೆ ಸಂಗೀತಾ ಮೇಲೆ ಹಲ್ಲೆ ಮಾಡಿದ್ದ ಮಹಾಂತೇಶ್ ಚೊಳಚಗುಡ್ಡ ಗೆ ವಕೀಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಬಹಿರಂಗಗೊಂಡಿದೆ.
ಈ ಹಿಂದೆ ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಆಕೆಯ ಪತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಆದರೆ ಈಗ ಮಹಾಂತೇಶ್ ಚೊಳಚಗುಡ್ಡ ಅವರ ಮೇಲೆ ಸಂಗೀತಾ ಅವರು ಚಪ್ಪಲಿಯಲ್ಲಿ ಹೊಡೆದ ವೀಡಿಯೋ ವೈರಲ್ ಆಗಿದೆ.
ಮೇ 14 ರಂದು ವೀರಭದ್ರೇಶ್ವರ ಗಿಪ್ಟ್ ಸೆಂಟರ್ ಮಾಲೀಕ ಮಹಾಂತೇಶ್ ಚೊಳಚಗುಡ್ಡ, ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ಹಲ್ಲೆ ಮಾಡಿದ್ದರು.ಮೊದಲು ಸಂಗೀತಾ, ಮಹಾಂತೇಶ್ ಅವರಿಗೆ ಚಪ್ಪಲಿಯಲ್ಲಿ ಹೊಡೆದು, ಚಪ್ಪಲಿ ಎಸೆದಿದ್ದಾರೆ. ಅದಾದ ಬಳಿಕ ಮಹಾಂತೇಶ್ ಸಹ ಮಹಿಳೆಗೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ್ದರು.
PublicNext
17/05/2022 04:35 pm