ಹಾವೇರಿ: ಗ್ರಾಮ ಪಂಚಾಯತಿಯಲ್ಲಿಯೇ ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ಪಿಡಿಓ ಎಸಿಬಿ ಬಲೆಗೆ ಬಿದ್ದಿದ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮ ಪಂಚಾಯತಿ ನಡೆದಿದೆ.
ಯರೆಸೀಮೆ ಗ್ರಾಮ ಪಂಚಾಯತಿಯ ಪಿಡಿಓ ಸವಿತಾ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಜಮೀನುಗಳ ಖಾತೆ ಬದಲಾವಣೆಗೆ ಮಾಡುವುದಕ್ಕಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಎಂಬುವರಿಂದ 55 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್. ಸಿಪಿಐ ಬಸವರಾಜ ಬುದ್ನಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಹಾವೇರಿ ಎಸಿಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
17/05/2022 08:07 pm