ಗುಜರಾತ್: ಉಪ್ಪಿನ ಕಾರ್ಖಾನೆಯ ಗೋಡೆಯೊಂದು ಕುಸಿದು 12 ಜನ ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ನಡೆದಿದೆ.
ಹಲ್ವಾಡ್ ಕೈಗಾರಿಕಾ ಪ್ರದೇಶದಲ್ಲಿರುವ ಜಿಐಡಿಸಿಯ ಸಾಗರ್ ಸಾಲ್ಟ್ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಸರ್ಕಾರ ಮೃತರ ಕುಟುಂಬಸ್ಥರ ನೆರವಿಗೆ ನಿಲ್ಲಲಿದೆ ಎಂದು ಗುಜರಾತ್ ಸಚಿವ ಬ್ರಿಜೇಶ್ ಮೆರ್ಜ ತಿಳಿಸಿದ್ದಾರೆ.
ಗೋಡೆ ಕುಸಿತದಲ್ಲಿ ಸಿಲುಕಿರುವವರನ್ನು ರಕ್ಷಣೆ ಮಾಡಲಾಗಿದೆ. ಅಂತರ್ ರಾಜ್ಯ ಕಾರ್ಮಿಕ ಮತ್ತು ಉದ್ಯೋಗ ಸಚಿವ ಬ್ರಿಜೇಶ್ ಮಿರ್ಜಾ ಮಾಹಿತಿ ನೀಡಿದ್ದಾರೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಇದು ಒಂದು ಹೃದಯ ವಿದ್ರಾವಕ ದುರಂತವಾಗಿದೆ ಎಂದಿದ್ದಾರೆ.
ಇನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಧನ, ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಧನವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
PublicNext
18/05/2022 08:21 pm