ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನದ ನಿಲ್ದಾಣಕ್ಕೆ ಬಾಂಬ್ ಬೆಂದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪರಿಚಿತ ವ್ಯಕ್ತಿಯೊಬ್ಬ ಬೆಂಗಳೂರಿನ ಕಂಟ್ರೋಲ್ ರೂಮ್ ಗೆ ಮುಂಜಾನೆ 3 ಗಂಟೆ ಸುಮಾರಿಗೆ ಕರೆ ಮಾಡಿ, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿ ಫೋನ್ ಕಟ್ ಮಾಡಿದ್ದಾನೆ. ಈ ಕರೆಯ ಬಗ್ಗೆ ಪೊಲೀಸ್ ಪರಿಶೀಲನೆ ನಡೆಸುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
PublicNext
20/05/2022 07:36 am