ಚಂದ್ರಾಪುರ: ಡೀಸೆಲ್ ತುಂಬಿದ್ದ ಟ್ಯಾಂಕರ್ ಮತ್ತು ಕಟ್ಟಿಗೆ ಸಾಗಿಸುತ್ತಿದ್ದ ಟ್ರಕ್ ನಡುವೆ ಸಂಭವಿಸಿದ ಡಿಕ್ಕಿ ಸಂಭವಿಸಿ 9 ಜನರು ಸಜೀವ ದಹನಗೊಂಡ ಭೀಕರ ಘಟನೆ ಮಹಾರಾಷ್ಟ್ರದ ಚಂದ್ರಾಪುರ ನಗರದ ಹೊರವಲಯದಲ್ಲಿ ನಡೆದಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಚಂದ್ರಾಪುರದ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ನಂದನ್ವರ್, ಚಂದ್ರಾಪುರ-ಮುಲ್ ರಸ್ತೆಯಲ್ಲಿ ಗುರುವಾರ ರಾತ್ರಿ 10:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಂದ್ರಾಪುರ ನಗರದ ಬಳಿಯ ಅಜಯ್‌ಪುರ ಬಳಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಡೀಸೆಲ್ ತುಂಬಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ, ಬೆಂಕಿ ಕಾಣಿಸಿಕೊಂಡು ಒಂಬತ್ತು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ಒಂದು ಗಂಟೆಯ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಅಜಯ್‌ಪುರವನ್ನು ತಲುಪಿದರು ಮತ್ತು ಕೆಲವು ಗಂಟೆಗಳ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಮೃತರ ಮೃತದೇಹಗಳನ್ನು ನಂತರ ಚಂದ್ರಾಪುರ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.
PublicNext
20/05/2022 02:25 pm