ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಬ್ಬಿಣದ ಪೈಪ್​ ಸಾಗಿಸುತ್ತಿದ್ದ ಟ್ರಕ್​ ಪಲ್ಟಿ- 8 ಜನ ಕಾರ್ಮಿಕರ ದುರ್ಮರಣ

ಪಾಟ್ನಾ: ಚಾಲಕನ ನಿಯಂತ್ರಣ ತಪ್ಪಿದ ಕಬ್ಬಿಣ ಪೈಪ್ ಸಾಗಿಸುತ್ತಿದ್ದ ಟ್ರಕ್ ಪಲ್ಟಿ ಹೊಡೆದ ಪರಿಣಾಮ 8 ಜನ ಕಾರ್ಮಿಕರ ಸಾವನ್ನಪ್ಪಿದ ದುರ್ಘಟನೆ ಬಿಹಾರದ ಪುರ್ನಿಯಾದ ಜಲಾಲ್‌ಗಢ ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದಾರಿಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 57ರಲ್ಲಿ ಈ ದುರ್ಘಟನೆ ನಡೆದಿದೆ. ಅವಘಡದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ನತದೃಷ್ಟ ವಾಹನದಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಟ್ರಕ್ ಕುರಿತಾಗಿ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

Edited By : Vijay Kumar
PublicNext

PublicNext

23/05/2022 10:39 am

Cinque Terre

49.38 K

Cinque Terre

0