ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಹೆಚ್. ಕಡದಕಟ್ಟೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿ ಕೊಲೆ

ದಾವಣಗೆರೆ: ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಹೊನ್ನಾಳಿ ತಾಲೂಕಿನ ಹೆಚ್. ಕಡದಕಟ್ಟೆ ಗ್ರಾಮದಲ್ಲಿ ನಡೆದಿದೆ.

ಹೊನ್ನಾಳಿಯ ದೊಡ್ಡಕೇರಿ ಬೀರಲಿಂಗೇಶ್ವರ ದೇವಾಲಯದ ಗಣಮಗ ಕುಮಾರಸ್ವಾಮಿ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನು ನಿನ್ನೆ ರಾತ್ರಿ ಹೊರಗೆ ಕರೆದುಕೊಂಡು ಹೋಗಿ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆಯೋ ಅಥವಾ ಬೇರೆ ಕಾರಣಕ್ಕೆ ‌ಆಗಿರಬಹುದೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸರ್ಕಲ್ ಇನ್ ಸ್ಪೆಕ್ಟರ್ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಶೀಘ್ರದಲ್ಲಿಯೇ ಬಂಧಿಸುತ್ತೇವೆ ಎಂದು ದೇವರಾಜ್ ಅವರು ಹೇಳಿದ್ದಾರೆ.

Edited By : Vijay Kumar
PublicNext

PublicNext

23/05/2022 02:12 pm

Cinque Terre

40.64 K

Cinque Terre

0