ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಸಾಯನಿಕ ಸೋರಿಕೆಯಿಂದ ಉಸಿರಾಟ ತೊಂದರೆ: ಆಸ್ಪತ್ರೆ ಪಾಲಾದ ಆರು ವಿದ್ಯಾರ್ಥಿಗಳು

ಮಡಿಕೇರಿ: ಕೊಡಗಿನ ಕುಶಾಲನಗರ ಹಾಗೂ ಸಿದ್ದಾಪುರ ಮಾರ್ಗದಲ್ಲಿ ಚಲಿಸುತ್ತಿದ್ದ ಲಾರಿಯಿಂದ ಕೆಂಪು ಬಣ್ಣದ ರಾಸಾಯನಿಕ ಸೋರಿಕೆಯಾಗಿದೆ. ಸುಮಾರು 60 ಕಿಲೋ ಮೀಟರ್ ರಾಜ್ಯ ಹೆದ್ದಾರಿ ಉದ್ದಕ್ಕೂ ಈ ದ್ರವ ಸೋರಿಕೆ ಪರಿಣಾಮ ಅಕ್ಕಪಕ್ಕದ ಜನ ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ಈ ಮಾರ್ಗದಲ್ಲಿ ಶಾಲೆಗೆ ತೆರಳುತ್ತಿದ್ದ ಶಾಲಾ ಮಕ್ಕಳು ಉಸಿರಾಟದ ಸಮಸ್ಯೆಯಿಂದ ಬಳಲಿದ್ದಾರೆ. ಅಸ್ವಸ್ಥಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ವ್ಯಾಪಿಸುತ್ತಿದ್ದಂತೆ ಕೊಡಗಿನ ಜನ ರಸ್ತೆಗಿಳಿಯಲು ಹೆದರಿ ಮನೆಯಲ್ಲೇ ಇದ್ದರು. ಆ ಮಾರ್ಗದಲ್ಲಿ ಹಾದು ಹೋದ ಒಂದು ಲಾರಿಯಿಂದ 60 ಕಿಲೋ ಮೀಟರ್ ಉದ್ದಕ್ಕೂ ಕೆಂಪುಬಣ್ಣದ ದ್ರವ ಸೋರಿಕೆಯಾಗಿತ್ತು. ಆ ರಸ್ತೆಗೆ ಇಳಿದವರಿಗೆ ಉಸಿರಾಡಲು ಆಗಲಿಲ್ಲ. ಉಸಿರು ಎಳೆದುಕೊಂಡರೆ ಕೆಮ್ಮು, ಎದೆ ಉರಿ, ತಲೆನೋವು ಕಾಡಿತ್ತು. ಕಣ್ಣು ಬಿಟ್ಟರೆ ಉರಿ ಉರಿಯ ಅನುಭವವಾಗುತ್ತಿತ್ತು. ಏನಾಗುತ್ತಿದೆ ಅಂತ ಗೊತ್ತಾಗುವಷ್ಟರಲ್ಲಿ ಶಾಲೆಗೆ ಹೋಗುವ 6 ಮಕ್ಕಳು ಅಸ್ವಸ್ಥರಾಗಿದ್ದರು. ಇದು ಅರ್ಧ ಕೊಡಗಿನಲ್ಲಿ ಆತಂಕ ಸೃಷ್ಟಿಸಿತ್ತು. ಲಾರಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಲಾರಿಯಲ್ಲಿ ಇದ್ದ ದ್ರವವನ್ನು ಲ್ಯಾಬ್‍ಗೆ ಕಳುಹಿಸಿದ್ದಾರೆ.

Edited By : Nagaraj Tulugeri
PublicNext

PublicNext

24/05/2022 05:32 pm

Cinque Terre

80.6 K

Cinque Terre

0