ಕೊಪ್ಪಳ: ಮಹಿಳೆಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರಸಿದ್ಧ ಕೊಟ್ಟೂರು ಮಠದ ಸ್ವಾಮೀಜಿ ಮೇಲೆ ಎಫ್‌ಐಆರ್ ದಾಖಲಾಗಿದೆ. ಕೊಟ್ಟೂರೇಶ್ವರ ಕಾಲೇಜಿನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಕಮಲಾಕ್ಷಿ ಎಂಬುವರು ತಮಗೆ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಬಸಲಿಂಗಮ್ಮ ಹಾಗೂ ಕೊಟ್ಟೂರು ಸ್ವಾಮೀಜಿ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಗ ದೂರು ನೀಡಿದ್ದಾರೆ.
ಕಮಲಾಕ್ಷಿಗೆ, ಬಸವಲಿಂಗಮ್ಮ ಎಂಬಾಕೆ ನೀನು ಇಲ್ಲಿಗೆ ಯಾಕೆ ಬಂದೆ ಎಂಬುದಾಗಿ ನಿಂದಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಸ್ವಾಮೀಜಿ ಬಳಿ ಪಿಸ್ತೂಲ್ ಇದೆ. ನಿನ್ನನ್ನು ಕೊಲೆ ಮಾಡಿಸುತ್ತೇನೆ ಎಂಬುದಾಗಿ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಕಮಲಾಕ್ಷಿ ನೀಡಿರುವ ದೂರಿನಲ್ಲಿ ಬಸಲಿಂಗಮ್ಮ ಕೊಲೆ ಬೆದರಿಕೆ ಹಾಕುವಾಗ ಅಲ್ಲಿಯೇ ಇದ್ದ ಕೊಟ್ಟೂರು ಸ್ವಾಮೀಜಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ಕೊಟ್ಟೂರು ಸ್ವಾಮೀಜಿ ಹಾಗೂ ಬಸಲಿಂಗಮ್ಮ ವಿರುದ್ಧ ಕಲಂ 323, 324, 504 ಹಾಗೂ 506 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
PublicNext
26/05/2022 01:26 pm