ಸಿರವಾರ: ಬಸ್ ನಿಲ್ದಾಣ ನೆಲಸಮಗೊಳಿಸುವ ವೇಳೆ ಸ್ಲ್ಯಾಬ್ ಕುಸಿದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ಸಂಭವಿಸಿದೆ. ಹೊಸ ಬಸ್ ನಿಲ್ದಾಣ ನಿರ್ಮಿಸುವ ಹಿನ್ನೆಲೆಯಲ್ಲಿ ಹಳೆ ಕಟ್ಟಡವನ್ನು ನೆಲಸಮಗೊಳಿಸುವ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕ.
ಮೃತ ಕಾರ್ಮಿಕನನ್ನು ಸಿರವಾರ ಪಟ್ಟಣದ ಬಾಬು 30 ಎಂದು ಗುರುತಿಸಲಾಗಿದೆ.
ಶವ ಹೊರತೆಗೆಯುತ್ತಿದ್ದಂತೆ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿತ್ತು. ಸುದ್ದಿ ತಿಳಿದ ಕೂಡಲೇ ಸಿರವಾರ ಸ್ಥಳಕ್ಕೆ ಭೇಟಿ ನೀಡಿದರು
PublicNext
27/05/2022 05:44 pm