ಮೈಸೂರು: ಪತ್ನಿ ವಾಯುವಿಹಾರಕ್ಕೆ ತೆರಳಿದ್ದಾಗ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಜಲಪುರಿ ಪೊಲೀಸ್ ಕ್ವಾಟ್ರಸ್‌ನಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ಪರಸಪ್ಪ ಕೊನ್ನೂರು (27) ನೇಣಿಗೆ ಶರಣಾದ ಕಾನ್‌ಸ್ಟೇಬಲ್. ಪರಸಪ್ಪ ಅವರಿಗೆ ಒಂದೂವರೆ ವರ್ಷಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಪತ್ನಿ ವಾಯುವಿಹಾರಕ್ಕೆ ತೆರಳಿದ್ದಾಗ ಕ್ವಾಟ್ರಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪರಸಪ್ಪ ಅವರು ಮೈಸೂರಿನ ದೇವರಾಜ ಠಾಣೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು 2016ನೇ ಬ್ಯಾಚ್‌ನಲ್ಲಿ ಆಯ್ಕೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಜರ್ ಬಾದ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
28/05/2022 08:39 am