ಭೂಪಾಲ್ : ಉತ್ಸವವೊಂದರ ವೇಳೆ ಪಾನಿಪುರಿ ಸೇವಿಸಿದ ಬಳಿಕ 97 ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ
ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ನಡೆದಿದೆ. ಅಸ್ವಸ್ಥಗೊಂಡವರೆಲ್ಲರೂ ಒಂದೇ ಅಂಗಡಿಯಲ್ಲಿ ಪಾನಿಪುರಿ ತಿಂದಿದ್ದಾರೆ. ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಕೆ.ಆರ್.ಶಾಕ್ಯಾ ಮಾತನಾಡಿ, ಪಾನಿಪುರಿ ತಿಂದ ಮಕ್ಕಳಿಗೆಲ್ಲರಿಗೂ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ.
ಅಸ್ವಸ್ತಗೊಂಡ 97 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿ ಪಾನಿಪುರಿ ಮಾರಾಟಗಾರನನ್ನು ಬಂಧಿಸಲಾಗಿದೆ ಮತ್ತು ತಿಂಡಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
PublicNext
29/05/2022 02:05 pm