ಚಿಕ್ಕಮಗಳೂರು: ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರಿಂದ ಖಾಸಗಿ ಹೋಟೆಲ್ ಮೇಲೆ ಹಿಂದೂ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಚರ್ಚ್ ಪಾದ್ರಿಗಳು ಸೇರಿದಂತೆ ನೂರಾರು ಮಂದಿ ಸಭೆ ನಡೆಸುತ್ತಿದ್ದ ವೇಳೆಯಲ್ಲಿ ಈ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಹೋಟಲ್‌ವೊಂದರಲ್ಲಿ ಈ ದಾಳಿ ನಡೆದಿದೆ. ಅನುಮತಿ ಇಲ್ಲದೆ ಸಭೆ ನಡೆಸಿರುವುದಲ್ಲದೆ ಅಮಾಯಕರಿಗೆ ಆಮಿಷವೊಡ್ಡಿ ಕ್ರಿಶ್ಚಿಯನ್ ಸಮುದಾಯಕ್ಕೆ ಮತಾಂತರ ಮಾಡುತ್ತಿರುವುದಾಗಿ ಆರೋಪ ಮಾಡಲಾಗಿದೆ.
ಬಜರಂಗದಳದ ಕಾರ್ಯಕತರಿಂದ ದಾಳಿ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿರುವ ನಗರ ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದೀಗ ಇಲ್ಲಿಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
PublicNext
29/05/2022 10:07 pm