ಚಿಕ್ಕಮಗಳೂರು: ಪ್ರೀತಿಸಿದ ಹುಡುಗಿ ಮದುವೆಗೆ ನಿರಾಕರಿಸಿದ್ದಕ್ಕೆ ಪ್ರಿಯಕರನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಬಳಿಯ ಶಂಕರಪುರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಚೇತನ್ (31) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಚೇತನ್ ಸಂಬಂಧಿಕೊಬ್ಬರಿಗೆ ವಾಟ್ಸಾಪ್ ವಾಯ್ಸ್ ಮೆಸೇಜ್‌ಅನ್ನು ಕಳುಹಿಸಿದ್ದಾರೆ. "ನಾನು ಹಾಗೂ ಭಾನುಮತಿ (ಹೆಸರು ಬದಲಾಯಿಸಲಾಗಿದೆ) ಒಂಬತ್ತು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದೀವಿ. ನನ್ನಿಂದ ಆಕೆ ನಾಲ್ಕು ಲಕ್ಷ ಹಣವನ್ನು ಕಿತ್ತುಕೊಂಡಿದ್ದಾಳೆ. ಆಕೆ ಮೋಸ ಮಾಡಿದಳು. ನನ್ನ ಸಾವಿಗೆ ನ್ಯಾಯ ಸಿಗಬೇಕೆಂದರೆ ಆಕೆಗೆ ಶಿಕ್ಷೆಯಾಗಬೇಕು. ನನ್ನ ಚಿತೆಗೆ ಆಕೆಯೇ ಬೆಂಕಿ ಇಡಬೇಕು, ಆಕೆ ಬರುವ ತನಕ ಹೆಣವನ್ನು ಕೆಳಗಿಳಿಸಬೇಡಿ. ನನಗೆ ಮಾನಸಿಕ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ' ಎಂದು ಯುವಕ ಚೇತನ್ ಆರೋಪಿಸಿದ್ದಾನೆ.
ಈ ಸಂಬಂಧ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
30/05/2022 07:31 pm