ಪಣಜಿ: ಅಪ್ರಾಪ್ತ ಬಾಲಕಿಯ ಮೇಲೆ 50 ವರ್ಷದ ಮಾಂತ್ರಿಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಗೋವಾದಲ್ಲಿ ನಡೆದಿದೆ. ಕಾಮುಕ ಮಾಂತ್ರಿಕ ಹಾಗೂ ನೀಚ ಕೃತ್ಯಕ್ಕೆ ಸಾಥ್ ನೀಡಿರುವ ಆರೋಪದ ಮೇಲೆ ಸಂತ್ರಸ್ತೆಯ ತಾಯಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಮಾಕಾಂತ್ ನಾಯಕ್ ಅಲಿಯಾಸ್ ಬಾಬಾ ಎಂದು ಗುರುತಿಸಲಾಗಿದೆ. ಈತ ಇಲ್ಲಿನ ಉತ್ತರ ಗೋವಾದ ಥಿವಿಮ್ ಗ್ರಾಮದ ನಿವಾಸಿಯಾಗಿದ್ದು, 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.
ಬಾಲಕಿಯ ಜೀವನದಲ್ಲಿ ಆಕೆಯ ಎಲ್ಲ ಆಸೆಗಳನ್ನು ಈಡೇರಿಸುವ ನೆಪದಲ್ಲಿ ಮಾಂತ್ರಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಠಾಣೆಗೆ ದೂರು ಬಂದಿತ್ತು. ಜೊತೆಗೆ ಈತನಿಗೆ ನೊಂದ ಬಾಲಕಿಯ ತಾಯಿ ಕೂಡ ಸಹಕರಿಸಿದ್ದಾಳೆ ಎಂಬ ಮಾಹಿತಿ ಇದೆ. ಆದ್ದರಿಂದ ಇಬ್ಬರನ್ನೂ ಬಂಧಿಸಲಾಗಿದೆ. ಅಲ್ಲದೇ, ಪೋಕ್ಸೋ ಮತ್ತು ಮಕ್ಕಳ ಹಕ್ಕು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಡಿಎಸ್ಪಿ ಜಿವ್ಬಾ ದಳವಿ ತಿಳಿಸಿದ್ದಾರೆ.
PublicNext
01/06/2022 05:26 pm