ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ ಜಿಲ್ಲಾಸ್ಪತ್ರೆಯ ವೈದ್ಯ ನೇಣಿಗೆ ಶರಣಾಗಿದ್ದು ಯಾಕೆ?

ದಾವಣಗೆರೆ: ನಗರದ ಸಿಜೆ ಆಸ್ಪತ್ರೆಯ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಸ್ಎಸ್ ಲೇ ಔಟ್ ನ ಎ ಬ್ಲಾಕ್ ನ ಮೊದಲ ಕ್ರಾಸ್ ಬಳಿ ನಡೆದಿದೆ.

ಡಾ. ಅರುಣ್ ಚಂದ್ರ ಆತ್ಮಹತ್ಯೆಗೆ ಶರಣಾದ ವೈದ್ಯ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಸಿಜೆ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆಗೆ ಸೇರಿಕೊಂಡಿದ್ದರು. ಗೌರವಧನ ರೂಪದಲ್ಲಿ‌ ಕಾರ್ಯ ನಿರ್ವಹಿಸುತ್ತಿದ್ದರು. ಎಲ್ಲರೊಂದಿಗೂ ಅನೋನ್ಯವಾಗಿದ್ದರು. ಆಸ್ಪತ್ರೆಗೆ ಬರುವ ರೋಗಿಗಳನ್ನ ಪ್ರೀತಿಯಿಂದಲೇ ಮಾತನಾಡಿಸಿ ಚಿಕಿತ್ಸೆ‌ ನೀಡುತ್ತಿದ್ದರು. ಅವರೆಂದರೆ ಎಲ್ಲರಿಗೂ ಅಚ್ಚುಮೆಚ್ಚಾಗಿದ್ದರು. ಕಷ್ಟಪಟ್ಟು ಓದಿ ಎಂಬಿಬಿಎಸ್ ಮಾಡಿ ವೈದ್ಯರಾಗಿದ್ದರು. ಹಲವು ವರ್ಷಗಳಿಂದಲೂ ವೈದ್ಯ ವೃತ್ತಿ ಮಾಡುತ್ತಿದ್ದರು.

ಚಂದ್ರಶೇಖರ ಎಂಬುವವರ ಪುತ್ರರಾದ ಅರುಣ್ ಚಂದ್ರ ಅವರು, ತಮ್ಮ ಮನೆಯ ಬಾತ್ ರೂಂನಲ್ಲಿ ಜೀನ್ಸ್ ಪ್ಯಾಂಟ್ ಅನ್ನು ಕುತ್ತಿಗೆಗೆ ಬಿಗಿದುಕೊಂಡು ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್, ಎಫ್ ಎಸ್ ಎಲ್ ತಂಡವೂ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ವೈದ್ಯ ಡಾ. ಅರುಣ್ ಚಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಚಿಗಟೇರಿ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. ಅವರು ಆತ್ಮಹತ್ಯೆಗೆ ಶರಣಾಗಿರುವ ಸುದ್ದಿ ಕೇಳುತ್ತಿದ್ದಂತೆ ದಿಗ್ಬ್ರಾಂತರಾಗಿದ್ದಾರೆ.

Edited By : Nagesh Gaonkar
PublicNext

PublicNext

01/06/2022 07:05 pm

Cinque Terre

58.26 K

Cinque Terre

0