ಬೆಂಗಳೂರು: ಜ್ಞಾನಪೀಠ ಸಾಹಿತಿ, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಮೊದಲ ಕುಲಪತಿ ಡಾ. ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ವಾಟ್ಸ್‌ಆ್ಯಪ್ ಮೂಲಕ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಕಂಬಾರರ ಹೆಸರಿನಲ್ಲಿ ಸಂದೇಶ ಕಳುಹಿಸುತ್ತಿರುವ ಅಪರಿಚಿತರು ಧನ ಸಹಾಯ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಲ್ಲಿ ನನ್ನ ಫೋಟೋ ಕೂಡ ಬಳಸಲಾಗಿದೆ ಎಂದು ಸಾಹಿತಿ ಚಂದ್ರಶೇಖರ ಕಂಬಾರ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಅಪರಾಧ ವಿಭಾಗಕ್ಕೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಹಾಗೂ ಯಾರೂ ಇದನ್ನು ನಂಬಬಾರದು ಮತ್ತು ತಮ್ಮ ಹೆಸರು ದುರುಪಯೋಗ ಆಗುತ್ತಿರುವುದನ್ನು ಪೊಲೀಸರು ತಡೆಗಟ್ಟಬೇಕು ಎಂದು ಮನವಿ ಮಾಡಿದ್ದಾರೆ.
PublicNext
02/06/2022 09:22 am