ಹಾಸನ: ಹಾಸನ ನಗರಸಭೆ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಪ್ರಶಾಂತ್‌ರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.
ಹಾಸನ ನಗರದ ಲಕ್ಷ್ಮೀಪುರ ಬಡಾವಣೆಯಲ್ಲಿ ನಿನ್ನೆ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಸಂಜೆ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುವಾಗ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳ ಗುಂಪು ಪ್ರಶಾಂತ್‌ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಕೊಲೆ ಕಂಡ ಹಾಸನ ಮಂದಿ ಬೆಚ್ಚಿಬಿದ್ದಿದ್ದಾರೆ. ಪೆನ್ಶನ್ ಮೊಹಲ್ಲಾ ಠಾಣೆಯಲ್ಲಿ ದೂರು ದಾಖಲಾಗಿದೆ.
PublicNext
02/06/2022 10:51 am