ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಜರಾತ್‌: ವಡೋದರ ರಾಸಾಯನಿಕ ಘಟಕದಲ್ಲಿ ಸ್ಫೋಟ- 8 ಮಂದಿಗೆ ಗಾಯ

ವಡೋದರ: ಗುಜರಾತಿನ ವಡೋದರದ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ವಡೋದರದ ನಂದೇಸರಿ ಪ್ರದೇಶದ ದೀಪಕ್ ನೈಟ್ರೈಟ್ ಕಂಪನಿಯಲ್ಲಿ ಸಂಜೆ 5 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು ನಂತರ ಬೆಂಕಿ ಕಾಣಿಸಿಕೊಂಡಿದೆ. ಆವರಣದೊಳಗಿದ್ದ ಎಂಟು ನೌಕರರಿಗೆ ಗಾಯಗಳಾಗಿವೆ. ರಾಸಾಯನಿಕ ಘಟಕದ ಬಾಯ್ಲರ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಬಂದಿವೆ. ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಐದರಿಂದ ಆರು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ.

Edited By : Vijay Kumar
PublicNext

PublicNext

02/06/2022 10:46 pm

Cinque Terre

128.54 K

Cinque Terre

0

ಸಂಬಂಧಿತ ಸುದ್ದಿ