ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ವಿಶಾಖಪಟ್ಟಣಂನಲ್ಲಿ ಮತ್ತೆ ಅನಿಲ ಸೋರಿಕೆ .!

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಮತ್ತೊಮ್ಮೆ ಅನಿಲ ಸೋರಿಕೆ ಸಂಭವಿಸಿದೆ.

ಹೌದು. ವಿಶಾಖಪಟ್ಟಣಂ ಜಿಲ್ಲೆಯ ಅಚ್ಚುತಪುರಂನಲ್ಲಿ ಇಂದು ಅನಿಲ ಸೋರಿಕೆ ಸಂಭವಿಸಿದ್ದು, ಮಹಿಳಾ ಕಾರ್ಮಿಕರು ಪ್ರಜ್ಞಾಹೀನ ಸ್ಥಿತಿ ತಲುಪಿದ್ದಾರೆ. ತಕ್ಷಣವೇ ಅವರನ್ನು ಬಸ್‌ನಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಪೋರಸ್ ಪ್ರಯೋಗಾಲಯದಿಂದ ಅನಿಲ ಸೋರಿಕೆಯಿಂದಾಗಿ ಸುಮಾರು 30 ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಲ್ಲದೆ ಈ ಪೈಕಿ 4 ಕಾರ್ಮಿಕರು ಸ್ಥಳದಲ್ಲೇ ಪ್ರಜ್ಞಾಹೀನ ಸ್ಥಿತಿ ತಲುಪಿದರು ಎನ್ನಲಾಗಿದೆ. ಅನಿಲವು ಮಾರಣಾಂತಿಕವಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾಗಿ ವರದಿಯಾಗಿದೆ.

Edited By : Vijay Kumar
PublicNext

PublicNext

03/06/2022 05:35 pm

Cinque Terre

114.84 K

Cinque Terre

0

ಸಂಬಂಧಿತ ಸುದ್ದಿ