ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೈದರಾಬಾದ್ ಗ್ಯಾಂಗ್​ ರೇಪ್ ಕೇಸ್: ಮೂವರು ಆರೋಪಿಗಳು ಅರೆಸ್ಟ್

ಹೈದರಾಬಾದ್: ಹೈದ್ರಾಬಾದ್ ಗ್ಯಾಂಗ್‌ ರೇಪ್‌ ಪ್ರಕರಣಕ್ಕೆ ಇಡೀ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ. ತೆಲಂಗಾಣದ ಪ್ರಭಾವಿ ಮಕ್ಕಳ ಈ ಹೇಯ ಕೃತ್ಯಕ್ಕೆ ದೇಶಾದ್ಯಂದ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಮೂವರು ಆರೋಪಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್ ಪ್ರದೇಶದಲ್ಲಿ ಮೇ 28ರಂದು ಪಾರ್ಟಿಯೊಂದನ್ನು ಮುಗಿಸಿ ಮನೆಗೆ ಮರಳುತ್ತಿದ್ದ 17 ವರ್ಷದ ಬಾಲಕಿಗೆ ಐವರು ಯುವಕರು ಡ್ರಾಪ್​ ಕೊಡುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಸಿಸಿಟಿವಿ ದೃಶ್ಯಗಳು ಮತ್ತು ಸಂತ್ರಸ್ತೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಎಲ್ಲ ಐವರು ಆರೋಪಿಗಳನ್ನು ಗುರುತಿಸಿದ್ದಾರೆ. ಅದರಲ್ಲಿ ಮೂವರು ಬಾಲಾರೋಪಿಗಳಾಗಿದ್ದಾರೆ.

ಸದ್ಯ ಬಂಧನವಾಗಿರುವ ಮೂವರ ಪೈಕಿ ಒಬ್ಬ ಆರೋಪಿ ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್ ಪಕ್ಷದ ಮುಖಂಡನ ಮಗ ಎಂದು ತಿಳಿದು ಬಂದಿದೆ.

Edited By : Vijay Kumar
PublicNext

PublicNext

05/06/2022 07:44 am

Cinque Terre

49.04 K

Cinque Terre

2

ಸಂಬಂಧಿತ ಸುದ್ದಿ