ಕಾರವಾರ: ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿ, ಓರ್ವನನ್ನು ಬಂಧಿಸಿದ್ದಾರೆ.
ಪ್ರವಾಸಿ ಮಂದಿರದ ಪಕ್ಕದಲ್ಲೇ ಇರುವ ಖಾಸಗಿ ಫಾರ್ಮ್ ಹೌಸ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಸಿಪಿಐ ವಸಂತ ಆಚಾರಿ ಅವರ ನೇತೃತ್ವದಲ್ಲಿ ಶನಿವಾರ ಪೊಲೀಸರು ದಾಳಿ ನಡೆಸಿ ಮುಂಬೈ, ಕೋಲ್ಕತ್ತಾ ಹಾಗೂ ಬಳ್ಳಾರಿ ಮೂಲದ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಮುರುಡೇಶ್ವರದ ತಿಮ್ಮಪ್ಪ ನಾಯ್ಕ ಎಂಬುವರನ್ನು ಬಂಧಿಸಿದ್ದಾರೆ.
ಈ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ಪಿಎಸ್ಐ ರವೀಂದ್ರ ಬಿರಾದಾರ, ಸುಧಾ ಅಘನಾಶಿನಿ ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
PublicNext
05/06/2022 08:53 am