ಚಂಡೀಗಢ: ಪಟಿಯಾಲ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಂಜಾಬ್‌ನ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
34 ವರ್ಷಗಳ ಹಿಂದಿನ ಪ್ರಕರಣವೊಂದರಲ್ಲಿ ಪಟಿಯಾಲ ಕೇಂದ್ರೀಯ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನವಜೋತ್ ಸಿಂಗ್ ಸಿಧು ಅವರಿಗೆ ಲಿವರ್ (ಯಕೃತ್ತಿನ) ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದಾಗಿ ಅವರನ್ನು ಚಂಡೀಗಢದ PGIMER ಆಸ್ಪತ್ರೆಗೆ ದಾಖ. ಸಿಧು ಅವರನ್ನು ಬಿಗಿ ಭದ್ರತೆಯಲ್ಲಿ ಪಟಿಯಾಲ ಕಾರಾಗೃಹದಿಂದ PGIMER ಆಸ್ಪತ್ರೆಗೆ ಕರೆತರಲಾಯಿತು. ಆರೋಗ್ಯ ಪರೀಕ್ಷೆ ಬಳಿಕ ಅವರನ್ನು ದಾಖಲು ಮಾಡಿಕೊಳ್ಳಲಾಗಿದ್ದು, ಅವರನ್ನು ಮತ್ತಷ್ಟು ಆರೋಗ್ಯ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಹೇಳಲಾಗಿದೆ.
1988ರಲ್ಲಿ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
PublicNext
07/06/2022 08:09 am