ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ಳಂಬೆಳಗ್ಗೆ ಕೋಲಾರದಲ್ಲಿ ಹರಿದ ನೆತ್ತರ.! ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಬರ್ಬರ ಹತ್ಯೆ

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಜಗನ್ ಮೋಹನ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಕೊಲೆಯಾಗಿರುವ ಜಗತ್ ಮೋಹನ್ ಅವರು ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಆಪ್ತರಾಗಿದ್ದರು. ಇಂದು ಬೆಳಿಗ್ಗೆ ಮುತ್ಯಾಲಪೇಟೆಯ ಗಂಗಮ್ಮ ದೇವಾಲಯಕ್ಕೆ ಹೋಗುವಾಗ ಅಪರಿಚಿತ ಗುಂಪೊಂದು ಜಗನ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದೆ. ತೀವ್ರವಾಗಿ ಗಾಯಗೊಂಡಿದ್ದ ಜಗನ್ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣ ಬಿಟ್ಟಿದ್ದಾರೆ.

ಮುಳಬಾಗಿಲು ನಗರದ ಮುತ್ಯಾಲಪೇಟೆಯಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್​​ಪಿ ಶ್ರೀನಿವಾಸಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Vijay Kumar
PublicNext

PublicNext

07/06/2022 08:53 am

Cinque Terre

49.25 K

Cinque Terre

0

ಸಂಬಂಧಿತ ಸುದ್ದಿ