ಹಾವೇರಿ: ತನ್ನ ವಿದ್ಯಾರ್ಥಿನಿಯ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನಲ್ಲಿ ಕೇಳಿ ಬಂದಿದೆ.
ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಹಾಯಕ ಪ್ರಾಧ್ಯಾಪಕನನ್ನು ನಿಂಗಪ್ಪ ಕಲಕೋಟಿ ಎಂದು ಗುರುತಿಸಲಾಗಿದೆ. ಮನೆ ಪಾಠ ಹೇಳಿಕೊಡುವುದಾಗಿ ಕರೆಯಿಸಿ ನಿಂಗಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೆ ಕಳೆದ ಒಂದೂವರೆ ವರ್ಷಗಳಿಂದ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿ ಆರೋಪಿಸಿದ್ದಾಳೆ.
ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕನಾಗಿ ನಿಂಗಪ್ಪ ಕಾರ್ಯನಿರ್ವಹಿಸುತ್ತಿದ್ದಾರೆ. ನಿರಂತರ ಲೈಂಗಿಕ ದೌರ್ಜನ್ಯದಿಂದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ವಿಷಯ ತಿಳಿದ ಆರೋಪಿ ನಿಂಗಪ್ಪ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ.
PublicNext
07/06/2022 01:56 pm