ಬೆಂಗಳೂರು: ಪ್ರೀತಿಸಿದ ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಮಿ ಚರಣ್ (25)ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಈಶಾನ್ಯ ವಿಭಾಗದ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.
ಕಳೆದ ಐದು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಚರಣ್ ಮದುವೆ ಮಾಡಿಕೊಳ್ಳುವ ನಿರ್ಧಾರ ಮಾಡಿ ಧರ್ಮಸ್ಥಳಕ್ಕೆ ಹೋಗಿ ಬಂದಿದ್ದರು. ಆದರೆ ಕೊನೆ ಕ್ಷಣದಲ್ಲಿ ಯುವತಿ ಮದುವೆ ಆಗಲು ನಿರಾಕರಿಸಿದ್ದಳು ಎನ್ನಲಾಗಿದೆ.
ಇದರಿಂದ ಮನನೊಂದ ಯುವಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ವಿದ್ಯಾರಣ್ಯಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
PublicNext
07/06/2022 02:23 pm