ಮೈಸೂರು: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದಕ್ಕೆ ಹೆತ್ತವರೇ ಮಗಳನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.ದ್ವಿತೀಯ ಪಿಯು ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಕೊಲೆಯಾದ ದುರ್ದೈವಿ. ಕಳೆದ 3 ವರ್ಷದಿಂದ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿ ಶಾಲಿನಿ ಬಾಲಮಂದಿರದಲ್ಲಿದ್ದಳು.
ಇತ್ತೀಚೆಗೆ ಮಗಳನ್ನು ಪೋಷಕರು ಮನೆಗೆ ಕರೆತಂದಿದ್ದರು. ಈ ನಡುವೆ ನಿಗೂಢವಗಿ ಕೊಲೆಯಾಗಿರುವ ಯುವತಿಯ ಮೃತದೇಹ ಗ್ರಾಮದ ಜಮೀನಿನಲ್ಲಿ ಪತ್ತೆಯಾಗಿದೆ.
ಈ ಕುರಿತು ಮಾಹಿತಿ ಲಭಿಸುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ತಂದೆ, ತಾಯಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ತಮಗೆ ಅವಮಾನ ಮಾಡಿದಕ್ಕೆ ತಾವೇ ಮಗಳನ್ನು ಕೊಲೆ ಮಾಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
PublicNext
08/06/2022 12:31 pm